ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವು - Karavali Times ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವು - Karavali Times

728x90

20 February 2026

ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವು

 ಬಂಟ್ವಾಳ, ಫೆಬ್ರವರಿ 20, 2026 (ಕರಾವಳಿ ಟೈಮ್ಸ್) : ಬಂಟ್ವಾಳ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನ ಕಳವು ಆಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೋಳಿಯಾರು ಗ್ರಾಮದ ಮದಕ-ಹಿದಾಯತ್ ನಗರ ನಿವಾಸಿ ಅಬ್ದುಲ್ ಜಬ್ಬಾರ್ ಪಿ (22) ಎಂಬವರು ಬೆಂಗಳೂರಿನಲ್ಲಿ ಮಕ್ಕಳ ಆಟಿಕೆ ಸಾಮಾನು ವ್ಯಾಪಾರ ಮಾಡಿಕೊಂಡಿದ್ದು, ಫೆ 8 ರಂದು ಮನೆಗೆ ಬಂದಿದ್ದವರು ವಾಪಾಸ್ಸು ಬೆಂಗಳೂರಿಗೆ ತೆರಳಲು ಫೆ 10 ರಂದು ಸಂಜೆ 7.30ಕ್ಕೆ ಬಿ ಮೂಡ ಗ್ರಾಮದ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಕೆಎ19 ಇಜಿ2192 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನವನ್ನು ಪಾರ್ಕ್ ಮಾಡಿ ರೈಲಿನಲ್ಲಿ ಬೆಂಗಳೂರಿಗೆ ಹೋಗಿದ್ದಾರೆ. ಫೆ 13 ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ರೈಲಿನಲ್ಲಿ ಮರಳಿ ಊರಿಗೆ ಬಂದು ನೋಡಿದಾಗ ದ್ವಿಚಕ್ರ ವಾಹನ ನಿಲ್ಲಿಸಿದ ಜಾಗದಲ್ಲಿ ಇಲ್ಲದೆ ಕಾಣೆಯಾಗಿರುತ್ತದೆ. ಕಳವಾದ ದ್ವಿಚಕ್ರ ವಾಹನದ ಮೌಲ್ಯ  ಸುಮಾರು 30 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಅಬ್ದುಲ್ ಜಬ್ಬಾರ್ ನೀಡಿದ ದೂರಿನಂತೆ  ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವು Rating: 5 Reviewed By: karavali Times
Scroll to Top