ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಬೋಳಂತೂರು ನೇಮಕ - Karavali Times ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಬೋಳಂತೂರು ನೇಮಕ - Karavali Times

728x90

20 February 2026

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಬೋಳಂತೂರು ನೇಮಕ

ಬಂಟ್ವಾಳ, ಫೆಬ್ರವರಿ 20, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ (ಗ್ರಾಮಾಂತರ) ವತಿಯಿಂದ ಬಂಟ್ವಾಳ ವಿಧಾನಸಭಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಬೋಳಂತೂರು  ಅವರು ನೇಮಕಗೊಂಡಿದ್ದಾರೆ.

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ (ಗ್ರಾಮಾಂತರ) ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. 

ಉಮೇಶ್ ಬೋಳಂತೂರು ಅವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿದ್ದು, ನರಿಕೊಂಬು ವಲಯ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಬಂಟ್ವಾಳ ತಾಲೂಕು ಕೆಡಿಪಿ ಸಮಿತಿ ಮಾಜಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಬೋಳಂತೂರು ನೇಮಕ Rating: 5 Reviewed By: karavali Times
Scroll to Top