ಬಂಟ್ವಾಳ, ಫೆಬ್ರವರಿ 11, 2026 (ಕರಾವಳಿ ಟೈಮ್ಸ್) : ವಿಟ್ಲ ಖಾಸಗಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಬುಧವಾರ ಘರ್ಷಣೆ ನಡೆದು ಇಬ್ಬರು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆರೋಪಿ ವಿದ್ಯಾರ್ಥಿ ಹೇಮಂತ್ (19) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಟ್ಲ ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳಾದ ಹೇಮಂತ್ ಮತ್ತು ಅಪ್ರಾಪ್ತ ಪ್ರಾಯದ ವಿಧ್ಯಾರ್ಥಿಯು ಗೆಳೆಯರಾಗಿದ್ದು, ಅವರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿರುವುದಾಗಿರುತ್ತದೆ. ಆ ಸಂದರ್ಭದಲ್ಲಿ ಹೇಮಂತ್ ತನ್ನ ಬಳಿಯಿದ್ದ ಪೆನ್ ಚಾಕುವಿನಿಂದ ಅಪ್ತಾಪ್ತ ವಿಧ್ಯಾರ್ಥಿಯ ಬೆನ್ನಿನ ಭಾಗಕ್ಕೆ ಇರಿದಿದ್ದಾನೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಜಗಳ ತಡೆಯಲು ಯತ್ನಿಸಿದ ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿಗೂ ಅಲ್ಪ ಪ್ರಮಾಣದ ಗಾಯವಾಗಿದೆ. ಆರೋಪಿ ವಿದ್ಯಾರ್ಥಿ ಹೇಮಂತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 32/2026 ಕಲಂ115(1) 352 109 118(1) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.













0 comments:
Post a Comment