ಧರ್ಮಸ್ಥಳ, ಫೆಬ್ರವರಿ 14, 2026 (ಕರಾವಳಿ ಟೈಮ್ಸ್) : ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯನ್ನು ದರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ಆರೋಪಿಯನ್ನು ಬೆಂಗಳೂರು-ಮಾಗಡಿ ನಿವಾಸಿ ನಂಜುಂಡ ಎಂದು ಹೆಸರಿಸಲಾಗಿದೆ. ಈತ 2017 ರ ಎಪ್ರಿಲ್ 8 ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಆಸಾಮಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿರುವ ಪೊಲೀಸರು ಫೆ 13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.












0 comments:
Post a Comment