ಬಂಟ್ವಾಳ ಸರಕಾರಿ ಆಸ್ಪತ್ರೆ ತ್ಯಾಜ್ಯ ನಿರ್ವಹಣೆಗೆ ಎಂ.ಆರ್.ಪಿ.ಎಲ್. ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ಮಂಜೂರು : ಶಾಸಕ ರಾಜೇಶ್ ನಾಯಕ್ - Karavali Times ಬಂಟ್ವಾಳ ಸರಕಾರಿ ಆಸ್ಪತ್ರೆ ತ್ಯಾಜ್ಯ ನಿರ್ವಹಣೆಗೆ ಎಂ.ಆರ್.ಪಿ.ಎಲ್. ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ಮಂಜೂರು : ಶಾಸಕ ರಾಜೇಶ್ ನಾಯಕ್ - Karavali Times

728x90

10 February 2026

ಬಂಟ್ವಾಳ ಸರಕಾರಿ ಆಸ್ಪತ್ರೆ ತ್ಯಾಜ್ಯ ನಿರ್ವಹಣೆಗೆ ಎಂ.ಆರ್.ಪಿ.ಎಲ್. ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ಮಂಜೂರು : ಶಾಸಕ ರಾಜೇಶ್ ನಾಯಕ್

ಬಂಟ್ವಾಳ, ಫೆಬ್ರವರಿ 10, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಯು ರಾಜೇಶ್ ನ್ಯಾಕ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ಫೆ 10 ರಂದು ನಡೆಯಿತು. 

ತಾಲೂಕು ಆಸ್ಪತ್ರೆಯ ತ್ಯಾಜ್ಯ ನಿರ್ವಹಣೆಗಾಗಿ ಎಂ ಆರ್ ಪಿ ಎಲ್ ಸಿ ಎಸ್ ಆರ್ ನಿಧಿಯಿಂದ ಶಾಸಕರ ಶಿಫರಾಸ್ಸಿನ ಮೇರೆಗೆ 48 ಲಕ್ಷ ರೂಪಾಯಿ ಮಂಜೂರಾಗಿದ್ದು, ಶೀಘ್ರದಲ್ಲಿ ಎಸ್ ಟಿ ಪಿ ಪ್ಲಾಂಟ್ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಶಾಸಕರು ತಿಳಿಸಿದರು. 

ಇದೇ ವೇಳೆ ಆಸ್ಪತ್ರೆ ನಿರ್ವಹಣೆ ಹಾಗೂ ವಿವಿಧ ಕಾರ್ಯಗಳ ಪ್ರಗತಿ ಬಗ್ಗೆ ಸಮಾಲೋಚನೆ ನಡೆಯಿತು. ಸಭೆಯಲ್ಲಿ ತಾಲೂಕು ಆಸ್ಪತ್ರೆಯ ಡಾ ಪುಷ್ಪಲತಾ, ಡಾ ಅಶೋಕ್ ರೈ, ಉಪತಹಶೀಲ್ದಾರ್ ದಿವಾಕರ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ತಾರನಾಥ ಸಾಲ್ಯಾನ್, ಪುರಸಭಾ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳಾದ ವೆಂಕಪ್ಪ ಪೂಜಾರಿ, ಜೋಸೆಫ್ ಪ್ರವೀಣ್ ರೋಡ್ರಿಗಸ್, ಅಶೋಕ್, ರೇಷ್ಮಾ ಟೀಲಿಸ್, ಪುರುಷೋತ್ತಮ ಬಂಗೇರಾ, ಶಿವಾನಂದ ನಾಯ್ಕ ಸಹಿತ ತಾಲೂಕು ಆಸ್ಪತ್ರೆ ವೈದ್ಯರುಗಳು, ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಸರಕಾರಿ ಆಸ್ಪತ್ರೆ ತ್ಯಾಜ್ಯ ನಿರ್ವಹಣೆಗೆ ಎಂ.ಆರ್.ಪಿ.ಎಲ್. ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ಮಂಜೂರು : ಶಾಸಕ ರಾಜೇಶ್ ನಾಯಕ್ Rating: 5 Reviewed By: karavali Times
Scroll to Top