ಬೆಳ್ತಂಗಡಿ, ಫೆಬ್ರವರಿ 27, 2026 (ಕರಾವಳಿ ಟೈಮ್ಸ್) : ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಅಕ್ರಮ ಗೋ ವಧೆ ಮಾಡುತ್ತಿದ್ದ ಮನೆಯನ್ನು ಉಪ್ಪಿನಂಗಡಿ ಪೊಲೀಸರು ಜಫ್ತಿ ಮಾಡಿದ್ದಾರೆ.
ಫೆ 26 ರಂದು ರಾತ್ರಿ ಇಲ್ಲಿನ ಮನೆಯ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ಪಿಎಸ್ಸೈ ಸುತೇಶ್ ಕೆ ಪಿ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಎಚ್ ಅಬ್ದುಲ್ ರಹಿಮಾನ್ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಎಚ್ ಅಬ್ದುಲ್ ರಹಿಮಾನ್ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.















0 comments:
Post a Comment