ಕೊಳ್ನಾಡು : ಅಕ್ರಮ ಗೋಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು - Karavali Times ಕೊಳ್ನಾಡು : ಅಕ್ರಮ ಗೋಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು - Karavali Times

728x90

27 February 2026

ಕೊಳ್ನಾಡು : ಅಕ್ರಮ ಗೋಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು

ಬಂಟ್ವಾಳ, ಫೆಬ್ರವರಿ 27, 2026 (ಕರಾವಳಿ ಟೈಮ್ಸ್) : ಚೆನ್ನರಾಯಪಟ್ಟಣದಿಂದ ಅಕ್ರಮ ಗೋಸಾಗಾಟ ನಡೆಸುತ್ತಿದ್ದ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಮಂಡ್ಯ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. 

ಫೆ 26 ರಂದು ರಾತ್ರಿ, ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ, ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿ ಕೆಎ13 ಬಿ8178 ನೋಂದಣಿ ಸಂಖ್ಯೆಯ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡು ಬಂದಿದೆ. ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೊರ್ವ ಚೇತನ್ ಎಂಬವರನ್ನು  ಪೊಲೀಸರು ವಿಚಾರಣೆ ನಡೆಸಿದಾಗ ಚನ್ನರಾಯಪಟ್ಟಣದಿಂದ ಶಂಕರ ಎಂಬವರು ಸಾಲೆತ್ತೂರಿನ ಶಾಫಿ ಎಂಬವರಿಗೆ, ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಸದ್ರಿ ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದು ತಿಳಿದು ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಕೊಳ್ನಾಡು : ಅಕ್ರಮ ಗೋಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು Rating: 5 Reviewed By: karavali Times
Scroll to Top