ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ : ಹಲವರಿಗೆ ಗಾಯ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲು - Karavali Times ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ : ಹಲವರಿಗೆ ಗಾಯ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲು - Karavali Times

728x90

23 March 2026

ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ : ಹಲವರಿಗೆ ಗಾಯ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲು

ಬಂಟ್ವಾಳ, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಗುಂಪು ಘರ್ಷಣೆ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 

ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22 ರಂದು ಬೆಳಿಗ್ಗೆ ಇವರು ಮತ್ತು ಅವರ ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಗೆ ಹೋಗಿ ವಾಪಾಸ್ಸು ಬರುತ್ತಿರುವಾಗ ಸದ್ರಿ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿತರಾದ ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ಎಂಬವರು ಗುಂಪು ಕಟ್ಟಿಕೊಂಡು ನಿಂತಿದ್ದು, ನವಾಝ್ ಹಾಗೂ ದಾವೂದ್ ಸ್ಥಳಕ್ಕೆ ಬಂದಾಗ ಆರೋಪಿಗಳು ಮಸೀದಿಯ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ತೆರಳಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ನವಾಝ್ ಹಾಗೂ ದಾವೂದ್ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 46/2026, ಕಲಂ 189(2), 191(2), 352, 351(2), 109(1), 118(1), 115(2) ಆರ್/ಡಬ್ಲ್ಯು 190 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ 2ನೇ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ಗಫೂರ್  (48) ಎಂಬವರು ನೀಡಿದ ಪ್ರತಿ ದೂರಿನಂತೆ, ಆರೋಪಿಗಳಾದ ಯಾಕೂಬ್, ಶಫೀಕ್, ಇಸಾಕ್, ಸಫ್ವಾನ್, ಅಶ್ರಫ್ ಸಾಹೇಬ್ ಎಂಬವರುಗಳು ಸಜಿಪಪಡು ಗ್ರಾಮದ ತಲೆಮೊಗರು ಮಸೀದಿ ಬಳಿ ಗಫೂರ್ ಅವರನ್ನು ತಡೆದು ನಿಲ್ಲಿಸಿ ಅವ್ಯಾಚವಾಗಿ ಬೈದು, ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಗಫೂರ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 47/2026, ಕಲಂ 126(2), 189(2), 191(2), 118(1), 115(2), 352, 351(2) ಜೊತೆಗೆ 190 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ 3ನೇ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಶೌಕತ್ ಆಲಿ (40) ಎಂಬವರು ನೀಡಿದ ದೂರಿನಂತೆ ಶೌಕತ್ ಅವರು ಮಾ 22 ರಂದು ಬೆಳಿಗ್ಗೆ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿ ಬಳಿಯ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದಾಗ ಆರೋಪಿಗಳಾದ ದಾವೂದ್, ಜುಬೈರ್, ಸೈದುದ್ದೀನ್, ನವಾಜ್, ಗಫೂರ್, ಶರೀಪ್, ಆಶಿಕ್ ಎಂಬವರು ಅಂಗಡಿಗೆ ಬಂದು ಮಸೀದಿ ವಿಚಾರದಲ್ಲಿ ತಕರಾರು ತೆಗೆದು ಶೌಕತ್ ಅವರ ಸಂಬಂಧಿ ರಬಿಯತ್ ಅವರಿಗೆ ಹಲ್ಲೆ ನಡೆಸಿರುತ್ತಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಸಫಾನಾ, ನಿಜಾಲ್, ಇಸಾಕ್, ಅಶ್ರಫ್ ಎಂಬವರಿಗೆ ಹಾಗೂ ಶೌಕತ್ ಅವರಿಗೂ ಅವ್ಯಾಚವಾಗಿ ಬೈದು ತಲವಾರಿನಿಂದ ಹಲ್ಲೆಗೆ ಯತ್ನಿಸಿರುತ್ತಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಸಂಬಂಧಿ ಆಯಿಷಾ ಎಂಬವರಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿರುತ್ತಾರೆ ಎಂದು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 48/2026, ಕಲಂ 189(2), 191(2), 191(3), 115(2), 118(1), 74, 352, 351(2), 329(3), 109 ಜೊತೆಗೆ 190 ಬಿ ಎನ್ ಎಸ್ ಮತ್ತು ಕಲಂ 21 (1)(ಎ) ಶಸ್ತ್ರಾಸ್ತ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. 

ಪ್ರಕರಣದಲ್ಲಿ ಭಾಗಿಯಾಗಿದ್ದ ಇತ್ತಂಡಗಳ ಪೈಕಿ ಗಾಯಾಳುಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾರಿಗೂ ಪ್ರಾಣಾಪಾಯದ ಗಾಯಗಳಾಗಿರುವುದಿಲ್ಲ ಎಂದಿರುವ ಪೊಲೀಸರು ಗಾಯಾಳುಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ : ಹಲವರಿಗೆ ಗಾಯ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲು Rating: 5 Reviewed By: karavali Times
Scroll to Top