ಕೇರಳ, ತಮಿಳ್ನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ : ಎಪ್ರಿಲ್ 9, 23 ಹಾಗೂ 29 ರಂದು ಚುನಾವಣೆ, ಮೇ 4 ರಂದು ರಿಸಲ್ಟ್ - Karavali Times ಕೇರಳ, ತಮಿಳ್ನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ : ಎಪ್ರಿಲ್ 9, 23 ಹಾಗೂ 29 ರಂದು ಚುನಾವಣೆ, ಮೇ 4 ರಂದು ರಿಸಲ್ಟ್ - Karavali Times

728x90

15 March 2026

ಕೇರಳ, ತಮಿಳ್ನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ : ಎಪ್ರಿಲ್ 9, 23 ಹಾಗೂ 29 ರಂದು ಚುನಾವಣೆ, ಮೇ 4 ರಂದು ರಿಸಲ್ಟ್

ದೆಹಲಿ, ಮಾರ್ಚ್ 16, ಮಾರ್ಚ್, 2026 (ಕರಾವಳಿ ಟೈಮ್ಸ್) : ಮೇ ತಿಂಗಳಲ್ಲಿ ಅಧಿಕಾರಾವಧಿ ಕೊನೆಗೊಳ್ಳಲಿರುವ ಐದು ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿಗಳಲ್ಲಿ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಭಾನುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇಂದಿನಿಂದಲೇ ಈ ಎಲ್ಲಾ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದಿದ್ದಾರೆ. 

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಎಪ್ರಿಲ್ 9 ರಂದು ಮತದಾನ ನಡೆಯಲಿದ್ದು, ತಮಿಳುನಾಡಿನಲ್ಲಿ ಎಪ್ರಿಲ್ 23ರಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 4 ರಂದು ಈ ಎಲ್ಲಾ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದವರು ಹೇಳಿದರು. 

  • Blogger Comments
  • Facebook Comments

0 comments:

Post a Comment

Item Reviewed: ಕೇರಳ, ತಮಿಳ್ನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ : ಎಪ್ರಿಲ್ 9, 23 ಹಾಗೂ 29 ರಂದು ಚುನಾವಣೆ, ಮೇ 4 ರಂದು ರಿಸಲ್ಟ್ Rating: 5 Reviewed By: karavali Times
Scroll to Top