ಬೆಂಗಳೂರು, ಮಾರ್ಚ್ 16, ಮಾರ್ಚ್, 2026 (ಕರಾವಳಿ ಟೈಮ್ಸ್) : ಎಚ್ ವೈ ಮೇಟಿ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರುಗಳ ನಿಧನದಿಂದ ತೆರವಾಗಿರುವ ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಎಪ್ರಿಲ್ 9 ರಂದು ಎರಡೂ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
ಎಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.












0 comments:
Post a Comment