ಬಜ್ಪೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್ - Karavali Times ಬಜ್ಪೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್ - Karavali Times

728x90

14 March 2026

ಬಜ್ಪೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಮಾರ್ಚ್ 15, ಮಾರ್ಚ್, 2026 (ಕರಾವಳಿ ಟೈಮ್ಸ್) : ಬಜಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾ 14 ರಂದು ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರ ದೀರ್ಘ ಕಾಲದ ನಿರೀಕ್ಷೆಯಂತೆ, ಇಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಬಡವರು ಮತ್ತು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ, ಅಚ್ಚುಕಟ್ಟಾದ ಪರಿಸರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಬಜಪೆಯ ಈ ಹೊಸ ಕ್ಯಾಂಟೀನ್ ಇಂದಿನಿಂದ ಸಾರ್ವಜನಿಕ ಸೇವೆಗೆ ಲಭ್ಯವಿದ್ದು, ಹಸಿವು ಮುಕ್ತ ಸಮಾಜದತ್ತ ನಮ್ಮ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು. 

ಈ ಸಂದರ್ಭ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಜ್ಪೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್ Rating: 5 Reviewed By: karavali Times
Scroll to Top