ಬಂಟ್ವಾಳ, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೆÇಲೀಸರು ಮೂವರನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿಗಳಾದ ಸೇಸಪ್ಪ (50), ಶೇಖರ (53) ಹಾಗೂ ಭಾನು ಪ್ರಕಾಶ್ (28) ಎಂದು ಹೆಸರಿಸಲಾಗಿದೆ.
ಮಾರ್ಚ್ 4 ರಂದು ಸಂಜೆ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣಾ ಎಎಸ್ಸೈ ರವೀಂದ್ರ ಎಂ ನೇತೃತ್ವದ ಪೆÇಲೀಸರು ಈ ದಾಳಿ ಸಂಘಟಿಸಿದ್ದಾರೆ.
ಸ್ಥಳದಲ್ಲಿದ್ದ 3 ಅಂಕದ ಕೋಳಿಗಳನ್ನು, 1,030/- ರೂಪಾಯಿಯಿ ನಗದು ಹಣ ಹಾಗೂ ಕೋಳಿ ಅಂಕಕ್ಕೆ ಬಳಸುವ ಸಣ್ಣ ಕತ್ತಿ (ಬಾಲ್) ಗಳನ್ನು ಪೆÇಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















0 comments:
Post a Comment