ಉಪ್ಪಿನಂಗಡಿ, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಾರು ಹಾಗೂ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ.
ಮೃತರನ್ನು ಕಾರು ಪ್ರಯಾಣಿಕರಾದ ಚಂದ್ರಶೇಖರ ಶಿಶಿಲ (57), ಜನಾರ್ದನ ಗೌಡ ಉಜಿರೆ (58) ಹಾಗೂ ಶ್ರೀಧರ ಗೌಡ ಮರಕಡ (61) ಎಂದು ಹೆಸರಿಸಲಾಗಿದೆ. ಕಾರಿನಲ್ಲಿ ಇನ್ನೋರ್ವ ಸುರೇಶ (58) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಶುಕ್ರವಾರ ಅಪರಾಹ್ನ ಸುಮಾರು 3.30ರ ವೇಳೆಗೆ ಹಾಸನದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದದ್ ರಾಜಹಂಸ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












0 comments:
Post a Comment