ಬಂಟ್ವಾಳ, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮಾರ್ಚ್ 7 ರಂದು ಸಂಜೆ 5.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಸಂಜೆ 6.30ಕ್ಕೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಗೌರವಾಧ್ಯಕ್ಷತೆಯಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ 15ನೇ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ 8.40ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
5 March 2026
- Blogger Comments
- Facebook Comments
Subscribe to:
Post Comments (Atom)


















0 comments:
Post a Comment