ಬಂಟ್ವಾಳ, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಬಂದಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಾ 30 ರಂದು ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಹೆಸರಿಸಲಾಗಿದೆ. ಇವರು ತನ್ನ ಮಗಳಾದ ದೀಪಶ್ರೀ (18) ಎಂಬವರೊಂದಿಗೆ ಮಾ 30 ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ 10.15ಕ್ಕೆ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಕೃಷ್ಣ ಶ್ಯಾಮ್ ಅವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಅದೇ ಕಾರಿನಲ್ಲಿ ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರು ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment