ಪುತ್ತೂರು : ಸರಕಾರದ ಯೋಜನೆಗೆ ನಕಲಿ ದಾಖಲೆ ಸಲ್ಲಿಸಿ ಹಣ ಪಡೆದ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times ಪುತ್ತೂರು : ಸರಕಾರದ ಯೋಜನೆಗೆ ನಕಲಿ ದಾಖಲೆ ಸಲ್ಲಿಸಿ ಹಣ ಪಡೆದ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times

728x90

13 March 2026

ಪುತ್ತೂರು : ಸರಕಾರದ ಯೋಜನೆಗೆ ನಕಲಿ ದಾಖಲೆ ಸಲ್ಲಿಸಿ ಹಣ ಪಡೆದ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಪುತ್ತೂರು, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕು ಆರ್ಯಾಪು ಗ್ರಾಮದಲ್ಲಿ, ಸರ್ಕಾರದ ಯೋಜನೆಯಡಿಯಲ್ಲಿ ಮನೆ ಮಂಜೂರಾತಿಗಾಗಿ ಕೊಡಲ್ಪಡುವ 1.50 ಲಕ್ಷ ರೂಪಾಯಿ ಹಣವನ್ನು ನಕಲಿ ದಾಖಲೆಗಳನ್ನು ಸಲ್ಲಿಸುವ ಮೂಲಕ ಪಡೆದುಕೊಂಡ ಆರೋಪಿಗಳಾದ ಬಾಬು ಮೇರಾ, ಜ್ಯೋತಿ ಹಾಗೂ ತನಿಯ ಮೇರಾ ಎಂಬವರುಗಳ ವಿರುದ್ದ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ 3 ವರ್ಷ ಸಜೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪಿತ್ತಿದೆ. 

ಸದ್ರಿ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈಗಳಾದ ಉದಯರವಿ ಮತ್ತು ಸಕ್ತಿವೇಲು ಅವರು ತನಿಖೆ ನಡೆಸಿ, ಆರೋಪಿತರ ವಿರುದ್ಧ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ನ್ಯಾಯಾಲಯಕ್ಕೆ  ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಸರಕಾರಿ ಅಭಿಯೋಜಕಿ ಕುಮಾರಿ ಚೇತನಾ ದೇವಿ ಅವರು ವಾದ ಮಂಡಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ನ್ಯಾಯಾಲಯವು ಆರೋಪಿಗಳಿಗೆ 3 ವರ್ಷ ಸಾದಾ ಸಜೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಸರಕಾರದ ಯೋಜನೆಗೆ ನಕಲಿ ದಾಖಲೆ ಸಲ್ಲಿಸಿ ಹಣ ಪಡೆದ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top