ಮಂಗಳೂರು, ಮಾರ್ಚ್ 25, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ 2025ನೇ ಸಾಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೋಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸಿ ಪವನ್ ಆಚಾರ್ಯ (22) ಎಂದು ಹೆಸರಿಸಲಾಗಿದೆ.
ಟಿಎನ್-ಮಡ್ಡಿ ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ಆರೋಪಿಯನ್ನು ಮಾರ್ಚ್ 25 ರಂದು ಕಂಕನಾಡಿ ನಗರ ಪೆÇಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 95/2025 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.











0 comments:
Post a Comment