ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ್ದ ಆರೋಪಿ ಬಂಧನ - Karavali Times ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ್ದ ಆರೋಪಿ ಬಂಧನ - Karavali Times

728x90

28 March 2026

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ್ದ ಆರೋಪಿ ಬಂಧನ

ಮಂಗಳೂರು, ಮಾರ್ಚ್ 28, ಮಾರ್ಚ್, 2026 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲ ತಾಣದಲ್ಲಿ ಕೋಮು ಪ್ರಚೋದಕ ಸಂದೇಶ ರವಾನಿಸಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ, ಮಂಜೇಶ್ವರ ನಿವಾಸಿ ಎಸ್ ಎನ್ ಕಬನುರಾಯ ಅವರ ಪುತ್ರ ಗಣೇಶ್ ಪ್ರಸಾದ್ (41) ಎಂದು ಗುರುತಿಸಲಾಗಿದೆ. 

2026 ರ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರಿನಲ್ಲಿ ನಡೆದ ಕಿರಾತ್ (ಕುರಾನ್ ಪಠಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟಿನಲ್ಲಿ “ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 15/2026 ಕಲಂ 196 ಬಿ ಎನ್ ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. 

ತನಿಖೆಯ ಸಂದರ್ಭ ಗಣೇಶ್ ಪ್ರಸಾದ್ ಎಂಬ ಫೇಸ್ ಬುಕ್ ಖಾತೆಯಿಂದ ಕೋಮು ಪ್ರಚೋದಕ ಕಮೆಂಟ್ ಹಾಕಿದ ವ್ಯಕ್ತಿಯು ಕಾಸರಗೋಡು ಜಿಲ್ಲೆ, ಮಂಜೇಶ್ವರದ ಗಣೇಶ್ ಪ್ರಸಾದ್ ಎಂದು ತಿಳಿದು ಬಂದ ಹಿನ್ನಲೆಯಲ್ಲಿ  ಮಾರ್ಚ್ 27 ರಂದು ಕಂಕನಾಡಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ್ದ ಆರೋಪಿ ಬಂಧನ Rating: 5 Reviewed By: karavali Times
Scroll to Top