ಮಂಗಳೂರು, ಮಾರ್ಚ್ 19, 2026 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲ ತಾಣಗಳಲ್ಲಿ 2025 ರಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್ ಗಳನ್ನು ಹಂಚಿಕೊಂಡ ಆರೋಪಿಯನ್ನು ಪತ್ತೆ ಹಚ್ಚಿರುವ ಮಂಗಳೂರು ಪೊಲೀಸರು ಆರೋಪಿ ಯುವತಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಮಂಗಳೂರು ನಗರದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ 353 (1), 353(2), 61 (2), 55 ಬಿ.ಎನ್.ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ “Terrorism has religion and so called Terrorists too. Its Islam” ಎಂದೂ ಮತ್ತು ಇದೇ ರೀತಿಯ ಕೆಲವು ಪೋಸ್ಟ್ ಗಳನ್ನು ಬೆಳ್ತಂಗಡಿ ತಾಲೂಕಿನ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿದ್ದು, ಈ ಬಗ್ಗೆ 2026 ರ ಮಾರ್ಚ್ 19 ರಂದು ಗುರುವಾರ ಆರೋಪಿಯನ್ನು ದಸ್ತಗಿರಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮೊಬೈಲ್ ಮತ್ತು ಪೋಸ್ಟ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

























0 comments:
Post a Comment