ಫರಂಗಿಪೇಟೆ ನದಿ ದಡದಲ್ಲಿ ಗಾಂಜಾ ಸೇವಿಸುತ್ತಿದ್ದವ ಪೊಲೀಸ್ ವಶಕ್ಕೆ - Karavali Times ಫರಂಗಿಪೇಟೆ ನದಿ ದಡದಲ್ಲಿ ಗಾಂಜಾ ಸೇವಿಸುತ್ತಿದ್ದವ ಪೊಲೀಸ್ ವಶಕ್ಕೆ - Karavali Times

728x90

17 March 2026

ಫರಂಗಿಪೇಟೆ ನದಿ ದಡದಲ್ಲಿ ಗಾಂಜಾ ಸೇವಿಸುತ್ತಿದ್ದವ ಪೊಲೀಸ್ ವಶಕ್ಕೆ

ಬಂಟ್ವಾಳ, ಮಾರ್ಚ್ 17, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಪುದು ಗ್ರಾಮದ ಫರಂಗಿಪೇಟೆ ನೇತ್ರಾವತಿ ನದಿ ದಡದಲ್ಲಿ ಮಾ 16 ರಂದು ಸಂಜೆ ನಡೆದಿದೆ. 

ಬಂಧಿತ ವ್ಯಕ್ತಿಯನ್ನು ಪುದು ಗ್ರಾಮದ ನಿವಾಸಿ ನೌಫಲ್ (27) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಮಂಜುನಾಥ್ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 

ಮಾ 16 ರಂದು ಸಂಜೆ 5.30 ರ ವೇಳೆಗೆ ಪುದು ಗ್ರಾಮದ ಫರಂಗಿಪೇಟೆ ನೇತ್ರವತಿ ನದಿ ದಡದಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವಿಸಿ ನಶೆ ಹೊಂದಿದ ರೀತಿಯಲ್ಲಿ ವರ್ತಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ನಶೆಯಲ್ಲಿ ಇದ್ದವನಂತೆ ಕಂಡು ಬಂದ ಆರೋಪಿ ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದ್ದು, ಈ ಸಂದರ್ಭ ಪೊಲೀಸರು ಆತನನ್ನು ಸುತ್ತುವರಿದು ಹಿಡಿದು ವಿಚಾರಿಸಿದ್ದಾರೆ. ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆರೋಪಿ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ ನದಿ ದಡದಲ್ಲಿ ಗಾಂಜಾ ಸೇವಿಸುತ್ತಿದ್ದವ ಪೊಲೀಸ್ ವಶಕ್ಕೆ Rating: 5 Reviewed By: karavali Times
Scroll to Top