ಮಂಗಳೂರು, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರುಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಕೂಡಾ ಗಾಬರಿ ಅಥವಾ ಆತಂಕಪಡಬಾರದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರುಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ ಇದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹ ಬಳಕೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.












0 comments:
Post a Comment