ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು - Karavali Times ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು - Karavali Times

728x90

3 March 2026

ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು

ಸುಳ್ಯ, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಸುಳ್ಯ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 118/24 ಕಲಂ 121(1), 132,262 ಬಿ ಎನ್ ಎಸ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ ಅಲಿಯಾಸ್ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸದ್ರಿ ಪ್ರಕರಣದ ವಿಚಾರಣೆಯು ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಬಿ ಮೋಹನ್ ಬಾಬು ಅವರು ಆರೋಪಿಗೆ ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ಕಲಂ 132ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ಕಲಂ 262ರಲ್ಲಿ ಕಾನೂನುಬದ್ಧವಾಗಿ ವಶಕ್ಕೆ ಪಡೆಯುವ ಸಂದರ್ಭ ತಡೆಯುಂಟು ಮಾಡಿದ್ದಕ್ಕಾಗಿ 1 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕುಮಾರಿ ಪ್ರೀತಿ ಎಂ.ಸಿ ಅವರು ವಾದ ಮಂಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top