ಕರ್ನಾಟಕ ಒನ್ ಕೇಂದ್ರ ತೆರೆಯಲು ಆನ್ ಲೈನ್ ಅರ್ಜಿ ಆಹ್ವಾನ - Karavali Times ಕರ್ನಾಟಕ ಒನ್ ಕೇಂದ್ರ ತೆರೆಯಲು ಆನ್ ಲೈನ್ ಅರ್ಜಿ ಆಹ್ವಾನ - Karavali Times

728x90

2 March 2026

ಕರ್ನಾಟಕ ಒನ್ ಕೇಂದ್ರ ತೆರೆಯಲು ಆನ್ ಲೈನ್ ಅರ್ಜಿ ಆಹ್ವಾನ

ಮಂಗಳೂರು, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ಬಂಟ್ವಾಳ ಪುರಸಭೆ, ಮೂಡಬಿದ್ರೆ ಪುರಸಭೆ, ಉಳ್ಳಾಲ ನಗರಸಭೆ ಮತ್ತು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1 ಕೇಂದ್ರ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ 2 ಕೇಂದ್ರ, ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 4 ಕೇಂದ್ರ ಹಾಗೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 9 ಕರ್ನಾಟಕ ಒನ್  ಕೇಂದ್ರಗಳನ್ನು ಸ್ಥಾಪಿಸಬಹುದು.

ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ವೆಬ್‍ಸೈಟ್ https://www.karnatakaone.gov.in/Public/Franchisee Term ನಲ್ಲಿ  ಮಾತ್ರ ಸಲ್ಲಿಸಬೇಕು. ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕರ್ನಾಟಕ ಒನ್ ಕೇಂದ್ರ ತೆರೆಯಲು ಆನ್ ಲೈನ್ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top