ಬೆಳ್ತಂಗಡಿ, ಮಾರ್ಚ್ 27, ಮಾರ್ಚ್, 2026 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡ ಘಟನೆ ಕಳೆಂಜ ಮುರದಮೇಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬಂಧಿತ ಆರೋಪಿಗಳನ್ನು ಪ್ರಶಾಂತ್, ಶಶಿಕುಮಾರ್, ಹೊನ್ನಪ್ಪ ಗೌಡ, ಜನಾರ್ದನ ಎಂದು ಹೆಸರಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಬೆಳ್ತಂಗಡಿ ಕಳೆಂಜ ಮುರದಮೇಲು ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು, ಹಿಂಸಾತ್ಮಕವಾಗಿ ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 2,250/- ರೂಪಾಯಿ ನಗದು ಹಣ, 14 ಅಂಕದ ಕೋಳಿಗಳು, ಕೋಳಿಗೆ ಕಟ್ಟುವ ಬಾಳು ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment