ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರ ದಾಳಿ : ಮೂವರು ವಶಕ್ಕೆ - Karavali Times ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರ ದಾಳಿ : ಮೂವರು ವಶಕ್ಕೆ - Karavali Times

728x90

23 March 2026

ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರ ದಾಳಿ : ಮೂವರು ವಶಕ್ಕೆ

ಬಂಟ್ವಾಳ, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ಸ್ಥಳಕ್ಕೆ ದಾಳಿ ನಡೆಸಿದ ಪೂಂಜಾಲಕಟ್ಟೆ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಕುಕ್ಕಳ ಗ್ರಾಮದ ಬಸವನಗುಡಿ ಎಂಬಲ್ಲಿ ಮಾ 21 ರಂದು ನಡೆದಿದೆ. 

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ನಿವಾಸಿಗಳಾದ ಭೋಜ ಪೂಜಾರಿ (49), ಶೇಖರ ಪೂಜಾರಿ (61) ಹಾಗೂ ಶೀನ ಶೆಟ್ಟಿ (70) ಎಂದು ಹೆಸರಿಸಲಾಗಿದೆ. 

ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಬಸವನಗುಡಿ ಸರಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಸೈ ಸಿಕಂದರ್ ಪಾಷಾ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ. ದಾಳಿ ವೇಳೆ ಮೂವರು ಪೊಲೀಸರ ಕೈಗೆ ಸಿಕ್ಕಿದ್ದು ಕೆಲವರು ಕೋಳಿ ಸಮೇತ ಓಡಿ ಪರಾರಿಯಾಗಿದ್ದಾರೆ. ದಾಳಿ ವೇಳೆ ಕೃತ್ಯಕ್ಕೆ ಬಳಸುತ್ತಿದ್ದ ಕೋಳಿ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರ ದಾಳಿ : ಮೂವರು ವಶಕ್ಕೆ Rating: 5 Reviewed By: karavali Times
Scroll to Top