ವಿದ್ಯುತ್ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖಾ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಂಪತ್ - Karavali Times ವಿದ್ಯುತ್ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖಾ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಂಪತ್ - Karavali Times

728x90

2 March 2026

ವಿದ್ಯುತ್ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖಾ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಂಪತ್

ಮಂಗಳೂರು, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಪ್ರಥಮ ದರ್ಜೆ ಇಲೆಕ್ಡ್ರಿಕಲ್ ಗುತ್ತಿಗೆದಾರರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಮಂಗಳೂರು ಲೋಕೋಪಯೋಗಿ ಇಲಾಖಾ ವಿದ್ಯುತ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಎಸ್ ಡಿ ಎ ಸಂಪತ್ ಅವರು ಮಾರ್ಚ್ 2 ರಂದು ಸೋಮವಾರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದಾರೆ. 

ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿರುವ ದೂರುದಾರರು 2025ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್ ಪಡೆಯಲು 4 ಶೇಕಡಾದಂತೆ ಒಟ್ಟು 22,600/- ರೂಪಾಯಿ ಕೊಡಬೇಕು ಎಂಬುದಾಗಿ ದ್ವಿತೀಯ ದರ್ಜೆ ಸಹಾಯಕ ಸಂಪತ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಸಂಪತ್ ವಿರುದ್ದ ಪ್ರಕರಣ ದಾಖಲಾಗಿತ್ತು.  ಈ ಬಗ್ಗೆ ಸೋಮವಾರ ಸಂಪತ್ ಅವರು ದೂರುದಾರರಿಂದ 22,600/- ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿದ್ದಾರೆ. ಸಂಪತ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯನ್ನು ಮಂಗಳೂರು ವಿಭಾಗ ಲೋಕಾಯುಕ್ತ ಎಸ್ಪಿ ಬಿ.ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣಾ ಡಿವೈಎಸ್ಪಿಗಳಾದ ಸುರೇಶ್ ಕುಮಾರ್ ಪಿ, ಡಾ. ಗಾನ ಪಿ ಕುಮಾರ್, ಇನ್ಸ್ ಪೆಕ್ಟರ್ ಶ್ರೀಮತಿ ಭಾರತಿ ಜಿ ಅವರ ಉಸ್ತುವಾರಿಯಲ್ಲಿ ಪೆÇಲೀಸ್ ಇನ್ಸ್ ಪೆಕ್ಟರ್ ಚಂದ್ರಶೇಖರ್ ಕೆ.ಎನ್. ಅವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ಅವರ ಜೊತೆ ನಡೆಸಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ವಿದ್ಯುತ್ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖಾ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಂಪತ್ Rating: 5 Reviewed By: karavali Times
Scroll to Top