ಮಾರ್ಚ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ - Karavali Times ಮಾರ್ಚ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ - Karavali Times

728x90

5 March 2026

ಮಾರ್ಚ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಮಂಗಳೂರು, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆ  ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದೆ. 

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ ಹಾಗೂ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ಹಾಗೂ ಶಾಶ್ವತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ. 

ಉಚಿತ ಕಾನೂನು ಸಲಹೆಗಾಗಿ ಎನ್ ಎ ಎಲ್ ಎಸ್ ಎ-15100ಗೆ ಕರೆ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ Rating: 5 Reviewed By: karavali Times
Scroll to Top