ಉಳ್ಳಾಲ, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಕೆ ಎಸ್ ಹೆಗ್ಡೆ ಆಸ್ಪತ್ರೆ ಎದುರು ಮಾ 22 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕು, ಕಸಬಾ ಬೆಂಗ್ರೆ, ಕೂಳೂರು ನಿವಾಸಿ ಮೊಹಮ್ಮದ್ ಝಾಕೀರ್ (19) ಎಂದು ಹೆಸರಿಸಲಾಗಿದೆ. ಮಾ 22 ರಂದು ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ನಾಗರಾಜ್ ಎಸ್ ಹಾಗೂ ಸಿಬ್ಬಂದಿಗಳ ತಂಡವು ಖಚಿತ ಮಾಹಿತಿ ಮೇರೆಗೆ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಕೆ ಎಸ್ ಹೆಗೆ ್ಡ ಆ¸್ಪÀತ್ರೆಯ ಎದುರು ಫಿಜಾ ಮೈದಾನದ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈತ ಎಂಡಿಎಂಎ ಮಾದಕ ವಸ್ತುವನ್ನು ತಂದು ತನ್ನ ಗಿರಾಕಿಗಳಿಗೆ ಮತ್ತು ಕಾಲೇಜು ವಿಧ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 1,06,000/- ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 10.6 ಗ್ರಾಂ ತೂಕದ ಎಂಡಿಎಂಎ ಮತ್ತು 1 ಸ್ಯಾಮ್ ಸಂಗ್ ಮೊಬೈಲ್ ಫೋನ್ ಹಾಗೂ ತೂಕ ಮಾ¥ನ, ಸ್ಮೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಹೀರೋ ಹೋಂಡಾ ಸ್ಪ್ಲೆಂಡರ್ ಪ್ಲಸ್ ಹೊಸ ಬೈಕ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












0 comments:
Post a Comment