ಬಂಟ್ವಾಳ, ಮಾರ್ಚ್ 15, ಮಾರ್ಚ್, 2026 (ಕರಾವಳಿ ಟೈಮ್ಸ್) : ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬಂಟ್ವಾಳ ಪುರಸಭೆಗೆ ಅನುಮೋದನೆಗೊಂಡಿಗಿರುವ ಕ್ರಿಯಾ ಯೋಜನೆಯಲ್ಲಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ 2.56 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಯು ರಾಜೇಶ್ ನಾಯ್ಕ್ ಅವರು ಬಡ್ಡಕಟ್ಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಗಿಡ ನೆಡುವ ಮೂಲಕ ಶ£ವಾರ ಚಾಲನೆ £ೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಪುರಸಭಾ ವ್ಯಾಪ್ತಿಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು, ಕೋಟ್ಯಾಂತರ ರೂಪಾಯಿ ಅನುದಾನ £ೀಡಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಇರುವ ಸಮಯದಲ್ಲಿ ಸುಮಾರು 100 ಕೋಟಿಯಷ್ಟು ಅನುದಾನ ತಂದಿದ್ದೇವೆ ಎಂದರು.
ಒಳಚರಂಡಿ ಯೋಜನೆ (ಯುಜಿಡಿ)ಗೆ ಪುರಸಭೆಗೆ 60 ಕೋಟಿಯಷ್ಟು ಹಣ ಬಿಡುಗಡೆಯಾಗಿದ್ದು, ಜಾಗದ ಸಮಸ್ಯೆ ಅಭಿವೃದ್ಧಿಗೆ ಸ್ವಲ್ಪ ತೊಡಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಪರಿಹಾರವಾಗಿ ಯೋಜನೆಗೆ ಅನುಷ್ಠಾನಕ್ಕೆ ವೇಗ ಸಿಗಲಿದೆ. ಎರಡನೇ ಹಂತದ ಅಮೃತ್ ಯೋಜನೆಯಡಿ ಕುಡಿಯುವ £ೀರಿನ ಯೋಜನೆಗೆ ಅನುದಾನ ಬಿಡುಗಡೆಯಾಗಿದೆ ಎಂದ ಶಾಸಕ ನಾಯಕ್, ಅತೀ ಅಗತ್ಯವಾದ ಮತ್ತು ಸಾರ್ವಜ£ಕರಿಗೆ ಅನುಕೂಲವಾಗುವಂತೆ ಜಕ್ರಿಬೆಟ್ಟು ಎಂಬಲ್ಲಿ 135 ಕೋಟಿ ರೂಪಾಯಿ ವೆಚ್ಚದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಡ್ಯಾಂ ಕಂ ಬ್ಯಾರೇಜ್ £ರ್ಮಾಣ £ರ್ಮಿಸಿದ ಬಳಿಕ ಕುಡಿಯುವ £ೀರಿನ ಸಮಸ್ಯೆ ಪರಿಹಾರವಾಗಿದೆ ಎಂದರು.
ಪುರಸಭಾ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಸಹಿತ ಸಮಸ್ಯೆಗಳ ಪರಿಹಾರದ ದೃಷ್ಟಿಯಿಂದ ಶೀಘ್ರವಾಗಿ ಅಧಿಕಾರಿಗಳ ಜೊತೆ ಸಭೆ ಕರೆಯುತ್ತೇನೆ ಎಂದು ಶಾಸಕರು ಇದೇ ವೇಳೆ ತಿಳಿಸಿದರು.
57.59 ಲಕ್ಷ ರೂಪಾಯಿ ಬಂಟ್ವಾಳ ಕಸ್ಬಾ ಗ್ರಾಮದ ಬಡ್ಡಕಟ್ಟೆ ಹಿಂದೂ ರುದ್ರಭೂಮಿ ಅಭಿವೃದ್ಧಿ ಹಾಗೂ ಉದ್ಯಾನವನ £ರ್ಮಾಣ ಅಭಿವೃದ್ಧಿ, 29.77 ಲಕ್ಷ ರೂಪಾಯಿ ಪರಿಶಿಷ್ಟ ಜಾತಿ ಖಾಯಂ/ ನೇರಪಾವತಿ ಪೌರ ಕಾರ್ಮಿಕರಿಗೆ ವಾಸಿಸಲು ಸಮುಚ್ಚಯ £ರ್ಮಾಣ, 71.46 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿ ಮೂಡ ಗ್ರಾಮದ ಭಂಡಾರಿಬೆಟ್ಟು-ಮೈರಾನಪಾದೆ ಪರಿಶಿಷ್ಟ ಜಾತಿ ಸಮುದಾಯ ಭವನ ಅಭಿವೃದ್ಧಿ, ಗಾಂದೋಡಿ ಸಂಪರ್ಕ ಕಾಲು ಸಂಕ ಹಾಗೂ ರಸ್ತೆ ಅಭಿವೃದ್ಧಿ, ಬಿ ಕಸ್ಬಾ ಗ್ರಾಮದ ಮುಗ್ದಾಲ್ ಪ್ರದೇಶದಲ್ಲಿ ಚರಂಡಿ ರಚನೆ, ಚೆಂಡ್ತಿಮಾರ್ ಸಮುದಾಯ ಭವನ ಅಭಿವೃದ್ಧಿ, 47.26 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಣೆಮಂಗಳೂರು ಗ್ರಾಮದ ಬೊಂಡಾಲ ಮಹಮ್ಮಾಯಿ ದೇವಸ್ಥಾನದ ರಸ್ತೆ ಅಭಿವೃದ್ಧಿ, ಬೊಂಡಾಲ ಕಲ್ಲಡ್ಕ ಗುಂಡೂರು ಸಂಪರ್ಕ ರಸ್ತೆ ಅಭಿವೃದ್ಧಿ, ಬಿ ಮೂಡ ಗ್ರಾಮದ ಚೆಂಡಾಡಿ ಅಲೆತ್ತೂರು ರಸ್ತೆ ಅಭಿವೃದ್ಧಿ ಹಾಗೂ ಕಸ್ಬಾ ಗ್ರಾಮದ ಅಗ್ರಾರ್ ರಸ್ತೆ ಬದಿ ತಡೆಗೋಡೆ ರಚನೆ ಹಾಗೂ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿ ಮೂಡ, ಬಿ ಕಸ್ಬಾ ಹಾಗೂ ಪಾಣೆಮಂಗಳೂರು ಗ್ರಾಮದ ವಿವಿಧ ಪ್ರದೇಶಗಳಲ್ಲಿ ದಾರಿದೀಪ ವಿಸ್ತರಣೆ, ಕಂಬಗಳ ಅಳವಡಿಕೆ ಹಾಗೂ ವಿವಿಧ ಕಡೆ ಸೆಮಿ ಹೈ ಮಾಸ್ಟ್ ಬೀದಿ ದೀಪ ಅಳವಡಿಕೆ ಕಾಮಗಾರಿಗಳಿಗೆ ಈ ಅನುದಾನ ಬಿಡುಗಡೆಯಾಗಿದೆ.
ಈ ಸಂದರ್ಭ ಪ್ರಮುಖರಾದ ಚೆನ್ನಪ್ಪ ಆರ್ ಕೋಟ್ಯಾನ್, ಬಿ ದಿನೇಶ್ ಭಂಡಾರಿ, ಗೋವಿಂದ ಪ್ರಭು, ಹರಿಪ್ರಸಾದ್, ಗಂಗಾಧರ ಪೂಜಾರಿ, ಶಶಿಕಲಾ, ಮೀನಾಕ್ಷಿ ಗೌಡ, ಜಾನಕಿ, ಕರುಣೇಂದ್ರ ಪೂಜಾರಿ, ಸುರೇಶ್ ಕುಲಾಲ್, ಅಜಯ್ ಕೊಂಬರಬೈಲು, ಜನಾರ್ದನ ಬೊಂಡಾಲ, ರಾಮದಾಸ ಬಂಟ್ವಾಳ, ಭಾಸ್ಕರ್ ಟೈಲರ್, ವಸಂತ ಭಂಡಾರಿ, ವಿಶ್ವನಾಥ ಚೆಂಡ್ತಿಮಾರ್, ಪ್ರಣಾಮ್ ಅಜ್ಜಿಬೆಟ್ಟು, ಜಯ ಕಲ್ಲಡ್ಕ ಮೊದಲಾದವರು ಇದ್ದರು.















0 comments:
Post a Comment