ಬಂಟ್ವಾಳ, ಮಾರ್ಚ್ 19, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಕೈಕಂಬ-ಮೊಡಂಕಾಪಿನಲ್ಲಿ ಗುರುವಾರ ಬೆಳಿಗ್ಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ನಗರಗಳಿಗೆ ನಿರಂತರ ಕುಡಿಯುವ ನೀರಿಗಾಗಿ ಕೈಗೊಂಡ ಸಮಗ್ರ ಕುಡಿಯುವ ನೀರು ಯೋಜನೆಯ ಮೈನ್ ಪೈಪ್ ಲೈನ್ ನೀರಿನ ರಭಸ ತಾಳಲಾರದೆ ಪೈಪ್ ಹಾನಿಯಾಗಿ ನೀರು ಕಾರಂಜಿಯಂತೆ ಚಿಮ್ಮಿತ್ತು. ಈ ಬಗ್ಗೆ ಸಾರ್ವಜನಿಕರು ಪುರಸಭೆ ಹಾಗೂ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ನೀರಿನ ಪ್ರಮಾಣ ಜಾಸ್ತಿ ಇರುವುದರಿಂದ ತಕ್ಷಣ ದುರಸ್ತಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗದೆ ಇದ್ದ ಕಾರಣ ನೀರು ಕಡಿಮೆಯಾದ ತಕ್ಷಣ ಶುಕ್ರವಾರ ಬೆಳಿಗ್ಗೆ ಈ ಬಗ್ಗೆ ದುರಸ್ತಿ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಆರಂಭದಲ್ಲಿ ಮಾಹಿತಿ ನೀಡಿದ್ದರು. ಆದರೆ ಸಂಜೆಯ ಬಳಿಕ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಯುಗಾದಿ ಹಾಗೂ ಈದುಲ್ ಫಿತ್ರ್ ಹಬ್ಬದ ಹಿನ್ನಲೆಯಲ್ಲಿ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಯವರ ಸೂಚನೆ ಮೇರೆಗೆ ಸಿಬ್ಬಂದಿಗಳು ಸಂಜೆಯೇ ಪೈಪ್ ದುರಸ್ತಿ ಮಾಡುವ ಕಾರ್ಯ ಕೈಗೊಂಡಿದ್ದಾರೆ.



























0 comments:
Post a Comment