ಮಂಗಳೂರು, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದ ನರ್ಸಿಂಗ್ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳ ವಿರುದ್ಧ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೇರಳ ರಾಜ್ಯ ನಿವಾಸಿಗಳಾದ ಅಜಿಲ್ ನಾಜಿ (21). ಸಜಿಲ್ ಅಬ್ದುಲ್ ಸಮದ್ (21), ಅಬು ಥಾಮಸ್ (23), ಮೆಲ್ಸನ್ ಟಿಲ್ ಟಿಲ್ಲಿಸ್ (19) ಹಾಗೂ ಅಶ್ವಿನ್ ಸಾಜಿ (20) ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ 23 ರಂದು ಐದು ಮಂದಿ ಯುವಕರು ಚಿಲಿಂಬಿ ಮಲರಾಯ ದೇವಸ್ಥಾನದ ಸಮೀಪವಿರುವ ಸ್ಟಿಂಗ್ ಫೀಲ್ಡ್ ಲೇ ಔಟ್ ಪ್ರದೇಶದಲ್ಲಿ ಮಾದಕ ವಸ್ತುವಾದ ಗಾಂಜಾ ಸೇವಿಸುತ್ತಿರುವುದು ಕಂಡುಬಂದಿದ್ದು, ವಿಚಾರಣೆ ನಡೆಸಿದಾಗ, ಅವರು ಮಂಗಳೂರು ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈ ಐದು ಮಂದಿ ವಿದ್ಯಾರ್ಥಿಗಳು ಮಂಗಳೂರು ನಗರದಲ್ಲಿ ಬಾಡಿಗೆ ಮನೆಯನ್ನು ಪಡೆದುಕೊಂಡು ವಾಸಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷೆಯಲ್ಲಿ ಅವರು ನಿಷೇಧಿತ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದು ದೃಢಪಟ್ಟಿರುವುದರಿಂದ, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಆರೋಪಿತರು ಮಂಗಳೂರು ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೂಲತಃ ಕೇರಳ ರಾಜ್ಯದವರಾಗಿದ್ದಾರೆ. ಈ ಕುರಿತು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಗೆ ವಿದ್ಯಾರ್ಥಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಮಾಹಿತಿ ನೀಡಲಾಗಿದೆ. ಅಲ್ಲದೆ ಯುವಕರಿಗೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರು ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.











0 comments:
Post a Comment