ಬಂಟ್ವಾಳ, ಮಾರ್ಚ್ 27, ಮಾರ್ಚ್, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾತನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಮಾ 26 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ರಿಯಾಜ್ (33) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment