ಮಾರ್ಚ್ 5 ರಿಂದ 7ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ - Karavali Times ಮಾರ್ಚ್ 5 ರಿಂದ 7ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ - Karavali Times

728x90

4 March 2026

ಮಾರ್ಚ್ 5 ರಿಂದ 7ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಮಂಗಳೂರು, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಾರ್ಚ್ 5 ರಿಂದ 7 ರವರೆಗೆ  ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಾರ್ಚ್ 5 ರಂದು ಬೆಳಿಗ್ಗೆ 10ಕ್ಕೆ ನಗರದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ, ಮಧ್ಯಾಹ್ನ 12ಕ್ಕೆ ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿ, ಮೀನುಗಾರ ಮಹಿಳೆಯರೊಂದಿಗೆ ಸಮಸ್ಯೆಗಳ ಕುರಿತು ಚರ್ಚೆ ನಡೆಸುವರು, ಮಧ್ಯಾಹ್ನ 1 ಗಂಟೆಗೆ ಬಂಟ್ವಾಳ ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ, 3 ಗಂಟೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಭೇಟಿ, ಸಂಜೆ 4.45ಕ್ಕೆ ಪುತ್ತೂರು ತಾರಿಗುಡ್ಡೆಯ ಕೇಪುಳೆಯಲ್ಲಿರುವ ಸಂತ್ರಸ್ಥೆ ಪೂಜಾ ಮನೆಗೆ ಭೇಟಿ, 5.30ಕ್ಕೆ ಪುತ್ತೂರು ಮಹಿಳಾ ಪೆÇಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಂಗಳೂರಿನಲ್ಲಿ ವಾಸ್ತವ್ಯ.

ಮಾರ್ಚ್ 6 ರಂದು ಬೆಳಿಗ್ಗೆ 9ಕ್ಕೆ ಮಂಗಳೂರು ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಭೇಟಿ, 11ಕ್ಕೆ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ “ಪೋಶ್” ಅಧಿನಿಯಮ-2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟನೆ, ಮಧ್ಯಾಹ್ನ 12ಕ್ಕೆ ಮಂಗಳೂರು ನಗರದಲ್ಲಿರುವ ಪಾಂಡೇಶ್ವರ ಮಹಿಳಾ ಪೆÇಲೀಸ್ ಠಾಣೆ ಭೇಟಿ, ಮಧ್ಯಾಹ್ನ 2.30ಕ್ಕೆ ಮಣಿಪಾಲ ಡಾ. ಟಿ.ಎಂ.ಪೈ ಆಡಿಟೋರಿಯಂನಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಅವರು ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಸಂಜೆ 6.30ಕ್ಕೆ ಮಂಗಳೂರು ದೇರಳಕಟ್ಟೆಯಲ್ಲಿರುವ ಹಿಂದುಳಿದ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಅವರ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ, ಬಳಿಕ ನಗರದಲ್ಲಿ ವಾಸ್ತವ್ಯ.

ಮಾರ್ಚ್ 7 ರಂದು ಬೆಳಿಗ್ಗೆ 9ಕ್ಕೆ ಮಂಗಳೂರು ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಭೇಟಿ, 11 ಗಂಟೆಗೆ ಮಂಗಳೂರಿನ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ, ಅಪರಾಹ್ನ 3ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಸಂಜೆ 5.50ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 5 ರಿಂದ 7ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ Rating: 5 Reviewed By: karavali Times
Scroll to Top