ಬಂಟ್ವಾಳ, ಮಾರ್ಚ್ 12, ಮಾರ್ಚ್, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ಅಬೂಬಕ್ಕರ್ (50) ಎಂಬಾತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪಿತ್ತಿದೆ.
2025 ರ ಸೆಪ್ಟೆಂಬರ್ 11 ರಂದು ನಡೆದಿದ್ದ ಪ್ರಕರಣದ ತನಿಖೆ ನಡೆಸಿದ ಅಂದಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಪೆÇಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಫಾಸ್ಟ್ ಟ್ರಾಕ್ ಸ್ಪೆಷಲ್ ಕೋರ್ಟ್-2) ಇಲ್ಲಿ ವಿಚಾರಣೆ ನಡೆದು, 2026 ರ ಮಾರ್ಚ್ 7 ರಂದು ಆರೋಪಿಯನ್ನು ದೋಷಿ ಎಂದು ನ್ಯಾಯಾಲಯ ಆದೇಶಿಸಿದೆ. ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50, ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಲಾಗಿದೆ.
ಪ್ರಕರಣದಲ್ಲಿ ವಿಶೇಷ ಸರಕಾರಿ ಅಭಿಯೋಜಕಿ ಶ್ರೀಮತಿ ಸಹನದೇವಿ ಅವರು ವಾದ ಮಂಡಿಸಿದ್ದು, ತನಿಖಾ ಸಹಾಯಕರಾಗಿ ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಪ್ರಶಾಂತ ಕುಮಾರ್ ಹಾಗೂ ನ್ಯಾಯಾಲಯ ಕರ್ತವ್ಯ ಸಿಬ್ಬಂದಿಯಾಗಿ ಪಿಸಿ ಸಂತೋಷ ಡಿ ಜಾಧವ ಅವರು ಸಹಕರಿಸಿರುತ್ತಾರೆ.












0 comments:
Post a Comment