ಬೆಂಗಳೂರು, ಮಾರ್ಚ್ 19, 2026 (ಕರಾವಳಿ ಟೈಮ್ಸ್) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರುವ, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಈಗಾಗಲೇ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 18 ರಂದು ಬುಧವಾರ ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂ ಜಿ ರಸ್ತೆ, ಕಲ್ಯಾಣ್ ನಗರ, ಬಳ್ಳಾರಿ ರಸ್ತೆ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಶಾಂತಿನಗರ ಮತ್ತು ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.












0 comments:
Post a Comment