ಜನಗಣತಿ : ಆನ್ ಲೈನ್ ಮೂಲಕ ಮನೆಯ ಸ್ವಯಂ ಗಣತಿ ಮಾಡಲು ಮಂಗಳೂರು ತಹಶೀಲ್ದಾರ್ ಕರೆ - Karavali Times ಜನಗಣತಿ : ಆನ್ ಲೈನ್ ಮೂಲಕ ಮನೆಯ ಸ್ವಯಂ ಗಣತಿ ಮಾಡಲು ಮಂಗಳೂರು ತಹಶೀಲ್ದಾರ್ ಕರೆ - Karavali Times

728x90

30 March 2026

ಜನಗಣತಿ : ಆನ್ ಲೈನ್ ಮೂಲಕ ಮನೆಯ ಸ್ವಯಂ ಗಣತಿ ಮಾಡಲು ಮಂಗಳೂರು ತಹಶೀಲ್ದಾರ್ ಕರೆ

ಮಂಗಳೂರು, ಮಾರ್ಚ್ 30, ಮಾರ್ಚ್, 2026 (ಕರಾವಳಿ ಟೈಮ್ಸ್) : ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ.ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ.

ಈ ನಿಟ್ಟಿನಲ್ಲಿ ಎಪ್ರಿಲ್ 1 ರಿಂದ 15ರವರಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಮೂಲಕ ಆನ್ ಲೈನಿನಲ್ಲಿ  15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ. ಹಾಗೂ ಪರಿಶೀಲನೆಗೆ ಬರುವ ಗಣತಿದಾರರಿಗೆ ಸದರಿ ಐಡಿಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿರುತ್ತದೆ. 

ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಈ ಮೇರೆಗೆ ವಿಕಸಿತ ಭಾರತ @ 2047 ಅಡಿಪಾಯಕ್ಕೆ ಸಹಕರಿಸಲು ಮಂಗಳೂರು ತಾಲೂಕಿನ ಎಲ್ಲಾ ಸಾರ್ವಜನಿಕರು ತಾವೇ ಆನ್ ಲೈನ್ ಲಿಂಕ್ https://se.census.gov.in ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಲು ಮಂಗಳೂರು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಜನಗಣತಿ : ಆನ್ ಲೈನ್ ಮೂಲಕ ಮನೆಯ ಸ್ವಯಂ ಗಣತಿ ಮಾಡಲು ಮಂಗಳೂರು ತಹಶೀಲ್ದಾರ್ ಕರೆ Rating: 5 Reviewed By: karavali Times
Scroll to Top