ಮಂಗಳೂರು, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಜಾಲಿ ದೇವಿನಗರ ನಿವಾಸಿ ದಿವಂಗತ ಮಸ್ತಪ್ಪ ಎಂಬವರ ಪುತ್ರ ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಹೆಸರಿಸಲಾಗಿದೆ. ಈತ ಮಾ 2 ರಂದು ಸಾಮಾಜಿಕ ಜಾಲ ತಾಣ ಇನ್ಸ್ಟಾಗ್ರಾಮಿನಲ್ಲಿ “ಸಪೋರ್ಟ್ ಮಾಡಿ ಬ್ರೊ ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂದು ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2026 ಕಲಂ 196(2), 197(2), 299, 253(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು.
ಮಾ 3 ರಂದು ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನನ್ನು ಮಂಗಳೂರು 7ನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.















0 comments:
Post a Comment