ಬಜ್ಪೆ-ಕೆಂಜಾರು ರಾಮಾಂಜನೇಯ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಪೊಲೀಸರು : ತಮಿಳ್ನಾಡು ಮೂಲದ ಆರೋಪಿ ಅರೆಸ್ಟ್ - Karavali Times ಬಜ್ಪೆ-ಕೆಂಜಾರು ರಾಮಾಂಜನೇಯ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಪೊಲೀಸರು : ತಮಿಳ್ನಾಡು ಮೂಲದ ಆರೋಪಿ ಅರೆಸ್ಟ್ - Karavali Times

728x90

31 March 2026

ಬಜ್ಪೆ-ಕೆಂಜಾರು ರಾಮಾಂಜನೇಯ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಪೊಲೀಸರು : ತಮಿಳ್ನಾಡು ಮೂಲದ ಆರೋಪಿ ಅರೆಸ್ಟ್

ಮಂಗಳೂರು, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಮಾರ್ಚ್ 3 ರಂದು ನಡೆದ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿ ತಮಿಳುನಾಡು ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ತಮಿಳ್ನಾಡು ರಾಜ್ಯದ ದಿಂಡಿಗುಲ್ ಜಿಲ್ಲೆಯ ನಿವಾಸಿ ಶೇಖ್ ಅಬ್ದುಲ್ ಖಾದರ್ ಎಂಬವರ ಪುತ್ರ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂದು ಹೆಸರಿಸಲಾಗಿದೆ. 

ಮಾರ್ಚ್ 3 ರಂದು ಬಜಪೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲನ್ನು ಮುರಿದು ದೇವಸ್ಥಾನಕ್ಕೆ ಒಳನುಗ್ಗಿ 3 ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು 25 ಸಾವಿರ ರೂಪಾಯಿ ಹಣವನ್ನು ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ಆರೋಪಿ ಪತ್ತೆಗೆ ತಂಡವನ್ನು ರಚಿಸಿ ಆರೋಪಿಯನ್ನು ಬಜಪೆ ಪೆÇಲೀಸರು ಖಚಿತ ಮಾಹಿತಿಯ ಆಧಾರದ ಮೇಲೆ ಮಾರ್ಚ್ 31 ರಂದು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತನನ್ನು ವಿಚಾರಣೆಗೆ ಒಳಪಡಿಸಿದಾಗ, ಆತನು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ವಶಕ್ಕೆ ಪಡೆಯಲಾಗಿದೆ. 

ಈತನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣದ ಆರೋಪಿಯಾಗಿರುತ್ತಾನೆ. ಅಲ್ಲದೇ ಇದೇ ವರ್ಷದ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಪಣಂಬೂರು ಪೆÇಲೀಸ್ ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ಪ್ಯಾಷನ್ ಪೆÇ್ರೀ ಮೋಟಾರ್ ಸೈಕಲ್ ಕಳವು ಪ್ರಕರಣದಲ್ಲೂ ಭಾಗಿಯಾಗಿರುತ್ತಾನೆ.

ಆರೋಪಿಯು ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೊಂದಿದವನಾಗಿದ್ದು, ಬಜಪೆ ಪೆÇಲೀಸ್ ಠಾಣೆಯ ಪೆÇಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ಮತ್ತು ಠಾಣಾ ಕ್ರೈಂ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಅವರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಜ್ಪೆ-ಕೆಂಜಾರು ರಾಮಾಂಜನೇಯ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಪೊಲೀಸರು : ತಮಿಳ್ನಾಡು ಮೂಲದ ಆರೋಪಿ ಅರೆಸ್ಟ್ Rating: 5 Reviewed By: karavali Times
Scroll to Top