ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ - Karavali Times ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ - Karavali Times

728x90

25 March 2026

ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

ಮಂಗಳೂರು, ಮಾರ್ಚ್ 25, 2026 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣೆಯಲ್ಲಿ 2018 ರ ಮೇ 16 ರಂದು ರಾತ್ರಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ತುಮಕೂರು ನಿವಾಸಿ ಅಶ್ವನ್ ಗೌಡ ಜೆ ಪಿ ಎಂಬಾತನು ಅಪರಾಧ ಎಸಗಿರುವುದು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಬೀತಾಗಿದ್ದು, ಅಪರಾಧಿಯನ್ನು ನ್ಯಾಯಾಲಯವು ಪಿ ಒ ಆಕ್ಟ್ ರಲ್ಲಿ ಬಿಡುಗಡೆ ಮಾಡಿರುತ್ತದೆ. ಆದರೆ ಸದ್ರಿ ಆಸಾಮಿಯು ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿಯಾಗಿರುತ್ತದೆ. 

ಈತನನ್ನು ಮಾರ್ಚ್ 24 ರಂದು ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ಸಿಬ್ಬಂದಿಗಳಾದ ಮಹೇಶ್ ಹಾಗೂ ಕಿರಣ ಅವರುಗಳ ತಂಡ,  ತುಮಕೂರು ಗುಂಗೂರುಮಳೆ ಎಂಬಲ್ಲಿ ದಸ್ತಗಿರಿ ಮಾಡಿ, ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾದೀಶ ಶಿವಣ್ಣ ಎಚ್ ಆರ್ ಅವರು ಆರೋಪಿಗೆ ಕಲಂ 380 ಐಪಿಸಿಯಡಿಯಲ್ಲಿ ಒಂದು ವರ್ಷ ಸಾದಾರಣ ಸಜೆ ಹಾಗೂ 1 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸದಿದ್ದರೆ 10 ದಿನಗಳ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಸದ್ರಿ ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಿ ಎಂ ಸಿ ಅವರು ವಾದ ಮಂಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Rating: 5 Reviewed By: karavali Times
Scroll to Top