ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ಸುಳ್ಯ ನ್ಯಾಯಾಲಯ - Karavali Times ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ಸುಳ್ಯ ನ್ಯಾಯಾಲಯ - Karavali Times

728x90

18 March 2026

ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ಸುಳ್ಯ ನ್ಯಾಯಾಲಯ

ಸುಬ್ರಹ್ಮಣ್ಯ, ಮಾರ್ಚ್ 19, ಮಾರ್ಚ್, 2026 (ಕರಾವಳಿ ಟೈಮ್ಸ್) : 2025 ರ ಆಗಸ್ಟ್ 17 ರಂದು ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, 2026 ರ ಮಾರ್ಚ್ 18ರಂದು ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾದೀಶ ಶಿವಣ್ಣ ಎಚ್ ಆರ್ ಅವರು ಆರೋಪಿ ಕೇರಳ ಮೂಲದ ಸತೀಶ್ (45) ಎಂಬಾತನಿಗೆ ಕಲಂ 331(4) ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ರೂಪಾಯಿ ದಂಡ, ಕಲಂ 305 ರಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ 500 ರೂಪಾಯಿ ದಂಡ, ದಂಡ ಪಾವತಿಸದಿದ್ದರೆ 10 ದಿನಗಳ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. 

ಸದ್ರಿ ಪ್ರಕರಣದ ತನಿಖಾಧಿಕಾರಿ ಪಿಎಸ್ಸೈ ಕಾರ್ತಿಕ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಅವರು ವಾದ ಮಂಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ಸುಳ್ಯ ನ್ಯಾಯಾಲಯ Rating: 5 Reviewed By: karavali Times
Scroll to Top