ಬಂಟ್ವಾಳ, ಮಾರ್ಚ್ 10, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಳೆದ ನವೆಂಬರ್ ತಿಂಗಳಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ಸಿನಲ್ಲಿ ಬ್ಯಾಗ್ ಒಳಗೆ ಇರಿಸಲಾಗಿದ್ದ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳ ಸಹಿತ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂದು ಹೆಸರಿಸಲಾಗಿದೆ. ಬಂಧಿತನಿಂದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 174 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
2025 ರ ನವೆಂಬರ್ 19 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬಸ್ಸಿನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಂತೆ ಪ್ರಕರಣದ ತನಿಖಾಧಿಕಾರಿ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಬಂಟ್ವಾಳ ನಗರ ಪೆÇಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ, ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೆÇಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರ ಅವರುಗಳು ಪಾಲ್ಗೊಂಡಿದ್ದರು.













0 comments:
Post a Comment