ರಾಸಾಯನಿಕ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು - Karavali Times ರಾಸಾಯನಿಕ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು - Karavali Times

728x90

26 March 2026

ರಾಸಾಯನಿಕ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಬಂಟ್ವಾಳ, ಮಾರ್ಚ್ 26, ಮಾರ್ಚ್, 2026 (ಕರಾವಳಿ ಟೈಮ್ಸ್) : ಅಮಲು ಪದಾರ್ಥ ಸೇವನೆಯ ಚಟ ಹೊಂದಿದ್ದ ವ್ಯಕ್ತಿಯೋರ್ವರು ರಾಸಾಯನಿಕ ಸೇವಿಸಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟ ಘಟನೆ ಸಂಗಬೆಟ್ಟು ಗ್ರಾಮದಲ್ಲಿ ಮಾ 25 ರಂದು ಸಂಭವಿಸಿದೆ. 

ಮೃತರನ್ನು ಇಲ್ಲಿನ ನಿವಾಸಿ ದೂಜ (55) ಎಂದು ಹೆಸರಿಸಲಾಗಿದೆ. ಅಮಲು ಪದಾರ್ಥ ಸೇವನೆಯ ಚಟ ಹೊಂದಿರುವ ಇವರು ಕಳೆದ ಒಂದು ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದರು. ಮಾರ್ಚ್ 20 ರಂದು ಮನೆಯಲ್ಲಿ ತಂದಿಟ್ಟಿದ್ದ ಗೆದ್ದಲಿಗೆ ಸಿಂಪಡಿಸುವ ರಾಸಾಯನಿಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಇವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ 25 ರಂದು ಸಂಜೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮೃತರ ಸಂಬಂಧಿ ಮೀನಾಕ್ಷಿ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ರಾಸಾಯನಿಕ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು Rating: 5 Reviewed By: karavali Times
Scroll to Top