ನರಿಕೊಂಬು : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು - Karavali Times ನರಿಕೊಂಬು : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು - Karavali Times

728x90

20 March 2026

ನರಿಕೊಂಬು : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ, ಮಾರ್ಚ್ 21, ಮಾರ್ಚ್, 2026 (ಕರಾವಳಿ ಟೈಮ್ಸ್) : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ತಾರಿಪಡ್ಪು ಎಂಬಲ್ಲಿ ಮಾ 19 ರಂದು ಸಂಭವಿಸಿದೆ. 

ಮೃತರನ್ನು ನರಿಕೊಂಬು ಗ್ರಾಮದ ನಿವಾಸಿ ಗಣೇಶ ಎಂದು ಹೆಸರಿಸಲಾಗಿದೆ. ಇವರು ತಮ್ಮ ಅಣ್ಣ ಪ್ರಕಾಶ್ (50) ಅವರ ಜೊತೆ ತೆಂಗಿನ ಕಾಯಿ, ಅಡಿಕೆ ಕೊಯ್ಯುವ ಕೆಲಸ ಮಾಡುವವರಾಗಿದ್ದು, ಮಾ 19 ರಂದು ಅಣ್ಣ ಪ್ರಕಾಶ ಜೊತೆ ಸೇರಿ ತಾರಿಪಡ್ಪು ನಿವಾಸಿ ವಿಠಲ ಮೂಲ್ಯ ಅವರ ಮನೆಯ ತೆಂಗಿನ ಮರದಿಂದ ತೆಂಗಿನ ಕಾಯಿ ತೆಗೆಯಲು ಹೋಗಿದ್ದರು. ಬೆಳಿಗ್ಗೆ ಸುಮಾರು 11 ಗಂಟೆಗೆ ತೆಂಗಿನ ಮರ ಏರಿದ ಗಣೇಶ್ ಅವರು ಕಾಲಿಗೆ ಹಾಕಿದ ಹಗ್ಗವು ಆಕಸ್ಮಿಕವಾಗಿ ತುಂಡಾಗಿ ಮರದ ಬುಡದ ಅಗರಿಗೆ ಬಿದ್ದಿದ್ದಾರೆ. ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ ಅವರನ್ನು ತಕ್ಷಣ ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಸಹೋದರ ಪ್ರಕಾಶ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನರಿಕೊಂಬು : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Rating: 5 Reviewed By: karavali Times
Scroll to Top