ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

28 March 2026

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಮಾರ್ಚ್ 28, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ತಿರೂರ್ ಎಂಬಲ್ಲಿಂದ ಮಾರ್ಚ್ 27 ರಂದು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 152/2017 ಕಲಂ 379 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಸುಮಾರು 8  ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ಅವರು ಮಾಹಿತಿ ಸಂಗ್ರಹಿಸಿ ಕೇರಳದ ತಿರೂರು ಎಂಬಲ್ಲಿ ಮಾರ್ಚ್ 27 ರಂದು ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top