10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವಾರಂಟ್ ಆಸಾಮಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ - Karavali Times 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವಾರಂಟ್ ಆಸಾಮಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ - Karavali Times

728x90

13 March 2026

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವಾರಂಟ್ ಆಸಾಮಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ

ಬಂಟ್ವಾಳ, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಳೆದ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ವಾರಂಟ್ ಆಸಾಮಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಾ 10 ರಂದು ಬಂಧಿಸುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಳಂ ಜಿಲ್ಲೆಯ ಕುಟ್ಟಿಂಚಾಲ್, ತರಂಪಲ್ಲಿ ನಿವಾಸಿ ಪ್ರಿನ್ಸ್ ಟಿ ಜೆ ಜೋಶ್ (43) ಎಂದು ಹೆಸರಿಸಲಾಗಿದೆ. ಈತ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ  ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಈತನನ್ನು ಮಾ 10 ರಂದು ಬಂಟ್ವಾಳ ಪೊಲೀಸರು ಕೇರಳ ರಾಜ್ಯದ ಕುಟ್ಟಂಪುಝ ಎಂಬಲ್ಲಿಂದ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 

ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಂತೆ ಪಿಎಸ್ಸೈ ಮಂಜುನಾಥ ಟಿ ಅವರ ಮಾರ್ಗದರ್ಶನದಲ್ಲಿ ಪಿಎಸ್ಸೈ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ಅವರು ಪಾಲ್ಗೊಂಡಿದ್ದರು. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವಾರಂಟ್ ಆಸಾಮಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top