ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಾತ ಪುತ್ತೂರು ಪೊಲೀಸರ ಬಲೆಗೆ - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಾತ ಪುತ್ತೂರು ಪೊಲೀಸರ ಬಲೆಗೆ - Karavali Times

728x90

22 March 2026

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಾತ ಪುತ್ತೂರು ಪೊಲೀಸರ ಬಲೆಗೆ

 ಪುತ್ತೂರು, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 169/2018 ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ಪುತ್ತೂರು ನಗರ ಠಾಣಾ ಪಿಎಸ್ಸೈ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿಗಳ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರ ಎಂಬಲ್ಲಿಂದ ಮಾ 21 ರಂದು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿದ್ದಾರೆ.

ಆರೋಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ನ್ಯಾಯಾಲಯದ ಷರತ್ತಿನ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2026 ಕಲಂ 269 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಾತ ಪುತ್ತೂರು ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top