ಕಡಬ, ಮಾರ್ಚ್ 28, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಡಬ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 15/2012, ಕಲಂ 302,201 ಐಪಿಸಿ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕನ್ವಿಕ್ಷನ್ ವಾರಂಟ್ ಆರೋಪಿ ಸುಳ್ಯ ಅಜ್ಜಾವರ ನಿವಾಸಿ ಎನ್ ಎಂ ಅಜೀಜ್ ಎಂಬಾತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯ 10 ವರ್ಷ ಶಿಕ್ಷೆ ವಿದಿಸಿರುತ್ತದೆ. ಸದ್ರಿ ಆಸಾಮಿಯು 2018ರಲ್ಲಿ ಕೇರಳ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದು, ನಂತರ ಕಲಬುರಗಿ ಜೇವರ್ಗಿ ನಿವಾಸಿ ಬಸವರಾಜು ಎಂಬುದಾಗಿ ಹೆಸರು ಬದಲಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ. ಈತನ ಪತ್ತೆಗಾಗಿ ಸತತವಾಗಿ ಪ್ರಯತ್ನಿಸಲಾಗಿ, ಈತನು ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿರುತ್ತದೆ. ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿ ವಾರಂಟ್ ಮೂಲಕ ಆಸಾಮಿಯನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
28 March 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment