ಮಂಗಳೂರು, ಮಾರ್ಚ್ 17, ಮಾರ್ಚ್, 2026 (ಕರಾವಳಿ ಟೈಮ್ಸ್) : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರೈಂ ನಂ. 375/2014, ಕಲಂ 393, 398 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀರು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲ ತಾಲೂಕು, ಕೈರಂಗಳ ಗ್ರಾಮದ ಮೋಂಟುಗೋಳಿ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ನವಾಜ್ (36) ಎಂದು ಹೆಸರಿಸಲಾಗಿದೆ. ಮಾರ್ಚ್ 17 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಂಗಳೂರು ನಗರದ 7ನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












0 comments:
Post a Comment