ಬಂಟ್ವಾಳ್ಯ, ಮಾರ್ಚ್ 16, ಮಾರ್ಚ್, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 166/2017, ಕಲಂ 379 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ರಾಜ್ಯದ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನನ್ನು ಮಾರ್ಚ್ 16 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ಅವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೆÇಳಚಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
16 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment