ಮಂಗಳೂರು, ಮಾರ್ಚ್ 21, ಮಾರ್ಚ್, 2026 (ಕರಾವಳಿ ಟೈಮ್ಸ್) : ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೆÇಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ದೇರಳಕಟ್ಟೆ ಮದನಿ ನಗರ ಸಮೀಪದ ಕೆ2 ಅಪಾರ್ಟ್ ಮೆಂಟ್, 2ನೇ ಮಹಡಿಯ ಫ್ಲಾಟ್ ನಂಬರ್ 1ಬಿ7 ನಿವಾಸಿ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂದು ಹೆಸರಿಸಲಾಗಿದೆ.
ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೆÇಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ವಿರುದ್ಧ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ 4 ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಮತ್ತು ಕಳವು ಸಂಬಂಧಿತ 2 ಪ್ರಕರಣಗಳು, ಉತ್ತರ ಪೆÇಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಹಾಗೂ ದರೋಡೆಗೆ ಸಂಬಂಧಿಸಿದ 2 ಪ್ರಕರಣಗಳು ದಾಖಲಾಗಿವೆ. ಬರ್ಕೆ ಪೆÇಲೀಸ್ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ 1 ಪ್ರಕರಣ ಹಾಗೂ ಉರ್ವ ಪೆÇಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ 1 ಪ್ರಕರಣ ದಾಖಲಾಗಿವೆ. ಈತನು ಉಳ್ಳಾಲ ಪೆÇಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಪ್ರಸ್ತುತ ಈತನ ವಿರುದ್ಧ 6 ವಾರಂಟ್ ಗಳು ಹಾಗೂ 1 ಪೆÇ್ರಕ್ಲಮೇಶನ್ ಜಾರಿಯಲ್ಲಿದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೆÇಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

























0 comments:
Post a Comment